ಉತ್ತರ ಕನ್ನಡ: ಮುಂಡಗೋಡು ತಾಲೂಕಿನ ದಾಸನಕೊಪ್ಪ ರಸ್ತೆಯ ಧರ್ಮಾ ಜಲಾಶಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯೋರ್ವನ ಮೇಲೆ ಪೊಲೀಸರು ದಾಳಿ ನಡೆಸಿ 2 ಕೆ.ಜಿ ಗಾಂಜಾ ವಶ ಪಡೆದುಕೊಂಡು ಆತನನ್ನು ಬಂಧಿಸಿದ ಘಟನೆ ಸೆ. 30 ರ ಶನಿವಾರ ನಡೆದಿದೆ.
ಹಾನಗಲ್ ತಾಲೂಕಿನ ತಿರವಳ್ಳಿ ಗ್ರಾಮದ ಸಲ್ಮಾನಖಾನ ಆಲೂರ(24) ಬಂಧಿತ ಆರೋಪಿತ.
ದಾಸನಕೊಪ್ಪ ರಸ್ತೆಯ ಧರ್ಮಾ ಜಲಾಶಯ ಬಳಿ ಕೇಸರಿ ಬಣ್ಣದ ಕೈ ಚೀಲದಲ್ಲಿ 2 ಕೆ.ಜಿ 28 ಗ್ರಾಂ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿದಾಗ ಖಚಿತ ಮಾಹಿತಿ ಮೇರೆಗೆ ಇಲ್ಲಿನ ಪೊಲೀಸರು ದಾಳಿ ನಡೆಸಿ ಆರೋಪಿ ಸಹಿತ 80 ಸಾವಿರ ಮೌಲ್ಯದ ಗಾಂಜಾ ವಶಕ್ಕೆ ಪಡೆಯಲಾಗಿದೆ.
ಸಿಪಿಐ ಬಿ.ಎಸ್. ಲೋಕಾಪುರ ನಿರ್ದೇಶನದಂತೆ ಪಿಎಸ್ ಐಗಳಾದ ಯಲ್ಲಾಲಿಂಗ ಕುನ್ನೂರ ಮತ್ತು ಹನಮಂತ ಕುಡಗುಂಚಿ ನೇತೃತ್ವದಲ್ಲಿ ಸಿಬ್ಬಂದಿಗಳಾದ ಗಣಪತಿ ಹೊನ್ನಳ್ಳಿ, ಕೊಟೇಶ ನಾಗರವಳ್ಳಿ, ಅಣ್ಣಪ್ಪ ಬಡಗೇರ, ಬಸವರಾಜ ಲಮಾಣಿ, ಸಂಜು ರಾಠೋಡ ಗುರುರಾಜ ಬಿ ಸೇರಿದಂತೆ ಸಿಬ್ಬಂದಿಗಳು ಭಾಗಿಯಾಗಿದ್ದರು.