ಬೆಂಗಳೂರು: ರಾಜ್ಯದಲ್ಲಿ ನಕಲಿ ಸುದ್ದಿ ತಡೆಗೆ ಗೃಹ ಇಲಾಖೆಯಿಂದ ಕಾನೂನು ಜಾರಿ ಮಾಡುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಕಲಿ ಸುದ್ದಿಗಳನ್ನು ಹರಿಬಿಡಲಾಗುತ್ತಿದೆ. ನಕಲಿ ಸುದ್ದಿ ತಡೆಗೆ ಕಾನೂನು ಜಾರಿಗೆ ತರಲಾಗುತ್ತಿದೆ.
ನಕಲಿ ಸುದ್ದಿಗಳ ಮೂಲಕ ಕೆಲವು ನಾಯಕರ ತೇಜೋವಧೆ ಮಾಡಲಾಗುತ್ತಿದೆ. ನಕಲಿ ಸುದ್ದಿಗಳ ತಡೆಗೆ ಗೃಹ ಇಲಾಖೆಯಿಂದ ಕಾನೂನು ಜಾರಿ ಮಾಡಲಾಗುತ್ತಿದೆ ಎಂದರು.
ರಾಜ್ಯ ಸರ್ಕಾರವು 100 ದಿನಗಳನ್ನು ಪೂರೈಸಿದೆ. ಕಾಂಗ್ರೆಸ್ ಕೊಟ್ಟ ಭರವಸೆಯನ್ನು ಈಡೇರಿಸಿದೆ. ರಾಜ್ಯದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಆಗಸ್ಟ್ 30 ರಂದು ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗುವುದು, ಡಿಸೆಂಬರ್ ನಲ್ಲಿ ಯುವನಿಧಿ ಯೋಜನೆಗೆ ಚಾಲನೆ ನೀಡಲಾಗುತ್ತದೆ ಎಂದು ಹೇಳಿದ್ದಾರೆ.