ಕಲಬುರಗಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತಮವಾಗಿ ಆಡಳಿತ ನಡೆಸುತ್ತಿದ್ದಾರೆ. ಅಲ್ಲದೆ ಕಳೆದ ಬಾರಿಯಂತೆ ಈ ಬಾರಿಯು ಸಿದ್ದರಾಮಯ್ಯ 5 ವರ್ಷ ಆಡಳಿತ ನಡೆಸಲಿದ್ದಾರೆ ಎಂದು ಕಲ್ಬುರ್ಗಿಯಲ್ಲಿ ಕೆಕೆಆರ್ಡಿಬಿ ಅಧ್ಯಕ್ಷ ಡಾ. ಅಜಯ್ ಸಿಂಗ್ ಹೇಳಿಕೆಯು ಭಾರಿ ಸಂಚಲನ ಮೂಡಿಸಿದೆ.
ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆಗಿ 5 ವರ್ಷಗಳ ಕಾಲ ಆಡಳಿತ ನಡೆಸುತ್ತಾರೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಉತ್ತಮ ಆಡಳಿತವಿದೆ.ರಾಜ್ಯ ಕಾಂಗ್ರೆಸ್ ಸರ್ಕಾರ ಈಗಾಗಲೇ 4 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ.
ಕಳೆದ ಬಾರಿಯಂತೆ ಈ ಬಾರಿಯು ಕೂಡ ಸಿದ್ದರಾಮಯ್ಯ 5 ವರ್ಷ ಆಡಳಿತ ನೀಡುತ್ತಾರೆ. ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯಲು ಯಾವುದೇ ಅಡಚಣೆ ಇಲ್ಲ ಎಂದು ಹೇಳಿಕೆ ನೀಡಿದ್ದಾರೆ.ಇನ್ನು ಇದಕ್ಕೂ ಮುಂಚೆ ಸಚಿವ ಕೆ ರಾಜಣ್ಣ ಅವರು ಮೂವರು ಡಿಸಿಎಂಗಳನ್ನ ಮಾಡಬೇಕು ಎನ್ನುವ ವಿಚಾರ ಸಂಚಲನ ಮೂಡಿಸಿದೆ .
ವಿಧಾನಸಭಾ ಚುನಾವಣೆಯಲ್ಲಿ ಜನ ಅದ್ಭುತ ಪೂರ್ವ ಬಹುಮತ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನಗಳನ್ನು ಗೆಲ್ಲಲಿದೆ. ಲೋಕಸಭಾ ಚುನಾವಣೆಯ ನಂತರ ಉಳಿದವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ ಎಂದು ಡಾ. ಅಜೇಯ್ ಸಿಂಗ್ ಹೇಳಿದರು.