ಬಳ್ಳಾರಿ : ಆರ್ಟಿಒ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಲಂಚ ಪಡೆಯುತ್ತಿದ್ದ ಆರ್ಟಿಒ ಸಿಬ್ಬಂದಿ ಚಂದ್ರಕಾಂತ್ ಗುಡಿಮನಿ ಮತ್ತು ಏಜೆಂಟ್ ಮೊಹಮ್ಮದ್ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕ್ಲಿಯರೆನ್ಸ್ ಸರ್ಟಿಫಿಕೆಟ್ ನೀಡಲು ಹಣಕ್ಕೆ ಬೇಡಿಕೆ ಇಟ್ಟ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್.ಪಿ. ಶಶಿಧರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಲಂಚ ಸ್ವೀಕರಿಸುವಾಗಲೇ ಲಂಚದ ಹಣ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.