ಮೈಸೂರು ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ನಾಳೆ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ನೋಟಿಸ್ ನೀಡಿದೆ. ಆದರೆ ಮುಖ್ಯಮಂತ್ರಿಗಳು ನಾಳೆ ಬುಧವಾರ ದಿನವಿಡೀ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರದಲ್ಲಿ ಮಾಡಲಿದ್ದಾರೆ ಆದರೆ ಯಾವ ಸಮಯದಲ್ಲಿ ಹೋಗಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ.
ಲೋಕಾಯುಕ್ತ ನೋಟಿಸ್ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಸಚಿವರ ಜೊತೆ ಸಿಎಂ ಚರ್ಚೆ ನಡೆಸಿರುವುದಾಗಿ ತಿಳಿದು ಬಂದಿದೆ. ಕಾನೂನು ಸಚಿವ ಹೆಚ್. ಕೆ. ಪಾಟೀಲ್, ಸತೀಶ್ ಜಾರಕಿಹೊಳಿ ಸೇರಿದಂತೆ ಅನೇಕ ಸಚಿವರು ಭಾಗಿಯಾಗಿದ್ದರು. ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ ನೋಟಿಸ್ ಕೊಟ್ಟಾಗ ಹೋಗಲೇಬೇಕು. ಲೋಕಾಯುಕ್ತ ಎಲ್ಲರಿಗಿಂತ ದೊಡ್ಡದು ಎಂದು ಸಿಎಂಗೆ ಹೇಳಿದ್ದಾರೆ.
ಈ ಮಧ್ಯೆ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಹೈಕೋರ್ಟ್ ನಲ್ಲಿ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠದಲ್ಲಿ ವಿಚಾರಣೆ ನಡೆಯಲಿದೆ. ಮುಖ್ಯಮಂತ್ರಿಗಳು ವಿಚಾರಣೆಗೆ ಹಾಜರಾಗುವುದು ರಾಜ್ಯಕ್ಕೆ ಅವಮಾನವಾಗಿದೆ. ಆದ್ದರಿಂದ ಅವರು ರಾಜೀನಾಮೆ ಕೊಟ್ಟು ವಿಚಾರಣೆ ಎದುರಿಸಬೇಕು ಎಂದು ಪ್ರತಿಪಕ್ಷ ಬಿಜೆಪಿ ಒತ್ತಾಯಿಸಿದೆ. ನಾಳೆ ಮೈಸೂರಿನಲ್ಲಿ ಕಪ್ಪು ಬಾವುಟ ಪ್ರದರ್ಶನ ಮತ್ತು ಮುತ್ತಿಗೆ ಹಾಕುಲು ಬಿಜೆಪಿ ನಿರ್ಧರಿಸಿದೆ.
ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ನಾಪತ್ತೆಯಾಗಿದ್ದು ಇದುವರೆಗೂ ಪತ್ತೆಯಾಗಿಲ್ಲ. ಇವರಿಗೆ ವಿಚಾರಣೆಗೆ ಬರುವಂತೆ ಸಮನ್ಸ್ ಕೊಟ್ಟಿದ್ದ ED ಇದೀಗ ಮತ್ತೊಮ್ಮೆ ಸಮನ್ಸ್ ಕೊಟ್ಟಿದೆ. ಇತ್ತ ಆಯುಕ್ತರ ನಿವಾಸದಲ್ಲಿದ್ದ CCTV ನಾಪತ್ತೆಯಾಗಿದ್ದು, ಅಧಿಕಾರಿಗಳು ಮೈಸೂರಿನ ಕುವೆಂಪುನಗರ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಮುಡಾ ಆಯುಕ್ತ ನಿವಾಸದಲ್ಲಿದ್ದ 5 CCTV, DVR, 3 CCTV ಕ್ಯಾಮರಾ, DVR ನಾಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.