ಬೀದರ್: ಪೊಲೀಸ್ ಪೇದೆಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ಪಟ್ಟಣದ ಟೂರಿಸ್ಟ್ ಲಾಡ್ಜ್ ನಲ್ಲಿ ನಡೆದಿದೆ.
ಉಮೇಶ್ ನಾಯ್ಕ್ (25) ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಪೇದೆ. ಆತ್ಮಹತ್ಯೆಗೆ ಪ್ರೇಮ ವೈಫಲ್ಯವೇ ಕಾರಣ ಎಂದು ಹೇಳಲಾಗುತ್ತಿದೆ.
2021 ರಲ್ಲಿ ಪೊಲೀಸ್ ಪೇದೆಯಾಗಿ ಆಯ್ಕೆಯಾಗಿದ್ದ ನಾಯ್ಕ್, ಬೀದರ್ ಜಿಲ್ಲೆಯ ಬಸವಕಲ್ಯಾಣ ನಗರ ಠಾಣೆಯಲ್ಲಿ ಹಲವು ತಿಂಗಳಿನಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಮೂಲತಃ ವಿಜಯನಗರ ಜಿಲ್ಲೆಯ ಪೊಲೀಸ್ ಪೇದೆಯಾಗಿರುವ ನಾಯ್ಕ್ ಸದ್ಯ ಪ್ರೇಮ ವೈಫಲ್ಯದಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.
ವಿಷಯ ತಿಳಿದು ಪೋಷಕರು ಬೀದರ್ಗೆ ಪೋಷಕರು ಬಂದಿದ್ದಾರೆ. ಬಸವಕಲ್ಯಾಣ ನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆಯಾಗಿದೆ.