ಕೋಲಾರ : ಜಿಲ್ಲೆಯಲ್ಲಿ ಬುಧವಾರ ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯೊಬ್ಬರು ತಮ್ಮ ಕತ್ತು ಸೀಳಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಮೃತರನ್ನು ಬೇತಮಂಗಲ ನಿವಾಸಿ (35) ವರ್ಷದ ರಹಮತ್ ಉಲ್ಲಾ ಬೇಗ್ ಎಂದು ಗುರುತಿಸಲಾಗಿದೆ.
ಪೊಲೀಸರ ಪ್ರಕಾರ, ಆರೋಪಿಯು ಜೀವನೋಪಾಯಕ್ಕಾಗಿ ಗ್ಯಾಸ್ ಸ್ಟೌವ್ಗಳನ್ನು ರಿಪೇರಿ ಮಾಡುತ್ತಿದ್ದರು ಮತ್ತು ಅವರು ಖಿನ್ನತೆಯಿಂದ ಬಳಲುತ್ತಿದ್ದರು. ಕಿಕ್ಕಿರಿದು ತುಂಬಿದ್ದ ಇಟಿಸಿಎಂ ಸರ್ಕಲ್ನಲ್ಲಿ ರಹಮತ್ ತನ್ನ ಕತ್ತು ಸೀಳಿಕೊಂಡಿದ್ದಾರೆ. ಸಾರ್ವಜನಿಕರು ಆತನನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದರು. ಆದರೆ, ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ಸಂಬಂಧ ಕೋಲಾರ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.