ವಿಜಯಪುರ :ವಿಜಯಪುರ ಜಿಲ್ಲೆ ಹಾಗೂ ತಾಲ್ಲೂಕಿನ ಹೊನ್ನುಟಗಿ ಗ್ರಾಮದಲ್ಲಿ ಕೃಷಿ ಇಲಾಖೆ, ಜಲಾನಯನ ಅಭಿವೃದ್ದಿ ಇಲಾಖೆ ಹಾಗೂ ವಿಜಯಪುರ ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ ವಿಶ್ವಬ್ಯಾಂಕ್ ನೆರವಿನ ರಿವಾರ್ಡ್ ಯೋಜನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡದ ಸಚಿವ ಎಂ ಬಿ ಪಾಟೀಲ್.
ಬರಗಾಲ ನಿವಾರಣೆಗೆ ಮಣ್ಣು ಮತ್ತು ನೀರಿನ ಸಂರಕ್ಷಣೆ ಅತ್ಯಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಕೃಷಿಯ ಸುಸ್ಥಿರತೆಗಾಗಿ ನವೀನ ಅಭಿವೃದ್ದಿಯ ಮೂಲಕ ಒಟ್ಟು 6,166.08 ಹೆಕ್ಟೇರ್ ಜಲಾನಯನ ಪ್ರದೇಶವನ್ನು ವಿಶ್ವ ಬ್ಯಾಂಕ್ ನೆರವಿನಿಂದ ಪುನಶ್ಚೇತನಗೊಳಿಸಲಾಗುತ್ತಿದೆ. ಈ ಯೋಜನೆಯಿಂದಾಗಿ ಹೊನ್ನುಟಗಿ, ಹಡಗಲಿ, ಕುಮಟಗಿ, ಮದಭಾವಿ ಹಾಗೂ ಆಹೇರಿ ಗ್ರಾಮ ಪಂಚಾಯತಿಗಳ ರೈತರಿಗೆ ಅನುಕೂಲವಾಗಲಿದೆ.
ಇಂದಿನ ಕಾರ್ಯಕ್ರಮದಲ್ಲಿ ನಾಗಠಾಣಾ ಶಾಸಕರಾದ ಶ್ರೀ ವಿಠ್ಠಲ ಕಟದಕೊಂಡ, ZP CEO ಶ್ರೀ ರಿಷಿ ಆನಂದ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಶ್ರೀ ರಾಜಶೇಖರ ವಿಲಿಯಮ್ಸ್, ಸಂಬಂಧಿಸಿದ ವಿವಿಧ ಗ್ರಾಮ ಪಂಚಾಯತಿಯ ಅಧ್ಯಕ್ಷರು, ರೈತರು, ಸಾರ್ವಜನಿಕರು ಉಪಸ್ಥಿತರಿದ್ದರು.