ವಿಜಯಪುರ : ನೀರಿನ ಉಳಿತಾಯ, ಸದ್ಬಳಕೆಗೆ ಬಾಂದಾರಗಳು ಸಹಕಾರಿಯಾಗಲಿದೆ. ಅವುಗಳ ನಿರ್ಮಾಣಕ್ಕೆ ಆದ್ಯತೆ ನೀಡುತ್ತಲೇ ಬಂದಿರುವೆ ಎಂದು ಸಚಿವ ಎಂ ಬಿ ಪಾಟೀಲ್ ಹೇಳಿದರು.
ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಬಬಲೇಶ್ವರ -ಯಕ್ಕುಂಡಿ ಹಳ್ಳಕ್ಕೆ ಅಡ್ಡಲಾಗಿ ರೂ. 97.50ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಬ್ರಿಜ್ ಕಮ್ ಬಾಂದಾರ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಭವಿಷ್ಯದಲ್ಲಿ ಈ ಭಾಗದ ರೈತರಿಗೆ, ಕೃಷಿಕರಿಗೆ ಅನುಕೂಲವಾಗಲಿದ್ದು, ನಮ್ಮ ಬಬಲೇಶ್ವರ ಮತಕ್ಷೇತ್ರ ಮತ್ತಷ್ಟು ಹಸಿರಾಗಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.