ಬೆಂಗಳೂರು : ಸಾರಿಗೆ ಇಲಾಖೆಯಲ್ಲಿ ಒಟ್ಟು 13,000 ಸಿಬ್ಬಂದಿ ನೇಮಕ ಮಾಡುತ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದರು.
ಬೆಂಗಳೂರಿನಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 13 ಸಾವಿರ ಸಿಬ್ಬಂದಿಗಳ ನೇಮಕಾತಿಯನ್ನು ಶೀಘ್ರದಲ್ಲಿ ನಡೆಸಲಾಗುತ್ತದೆ.
ಖಾಸಗಿ ಬಸ್ ಗಳಿಂದ ಹೆಚ್ಚಿನ ದರ ವಸೂಲಿ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು ಹೆಚ್ಚಿನ ದರ ತೆಗೆದುಕೊಳ್ಳುತ್ತಿದ್ದರೆ ಅಂತವರ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆಯನ್ನು ನೀಡಿದ್ದೇವೆ.
ಗೌರಿ ಗಣೇಶ ಹಬ್ಬಕ್ಕೆ ಹೆಚ್ಚುವರಿ ಬಸ್ ಬಿಡಲು ನಿರ್ಧರಿಸಿದ್ದೇವೆ. ಸೋಮಶೇಖರ್ ಜೊತೆಯಲ್ಲಿ ಯಾವುದೇ ರಾಜಕೀಯ ಚರ್ಚೆ ಮಾಡಿಲ್ಲ. ಸೋಮಶೇಖರ್ ಮರು ಸೇರ್ಪಡೆಯಾಗುತ್ತೇನೆ ಅಂದ್ರೆ ಯೋಚಿಸೋಣ ಎಂದು ಬೆಂಗಳೂರಿನಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.