ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬನ್ನಟ್ಟಿ ಗ್ರಾಮದಲ್ಲಿ ಮಲ್ಲಿಕಾರ್ಜುನ ದೇವಸ್ಥಾನದ ಸಮುದಾಯ ಭವನದ ಭೂಮಿ ಪೂಜೆಯನ್ನು ಶಾಸಕ ಅಶೋಕ ಮನಗೂಳಿ ಭಾನುವಾರದಂದು ದ್ವಿಚಕ್ರ ವಾಹನದ ಮೇಲೆ ಬಂದು ನೆರವೇರಿಸಿದರು. ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಸಮುದಾಯ ಭವನದ ಭೂಮಿ ಪೂಜೆ ಮಾಡಿ ಮಾತನಾಡುತ್ತಾ. ಕಾಮಗಾರಿಯಲ್ಲಿ ಯಾವುದೇ ರೀತಿಯಿಂದ ಲೋಪದೋಷವಾಗದಂತೆ ಅಚ್ಚುಕಟ್ಟಾಗಿ ಪೂರ್ಣಗೊಳಿಸಬೇಕು ಎಂದು ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಈ ವೇಳೆ ಪಕ್ಷದ ಕಾರ್ಯಕರ್ತರು ಮುಖಂಡರು ಉಪಸ್ಥಿತರಿದ್ದರು.

