ಯಾದಗಿರಿ : ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಇಳಿಸಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಯತ್ನಿಸುತ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಬುಧವಾರ ಯಾದಗಿರಿಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯನವರೇ ನೀವು ಡಿಕೆಶಿಗಾಗಲೀ, ಶಾಮನೂರು ಶಿವಶಂಕರಪ್ಪನವರಿಗಾಗಲೀ ಹೆದರಬೇಡಿ ಎಂದಿದ್ದಾರೆ. ಸಿಎಂ ಸಿದ್ದರಾಮಯ್ಯನವರಿಗೆ ಸ್ವತಃ ಕಾಂಗ್ರೆಸ್ ಪಕ್ಷದವರೇ ಸುಗಮವಾಗಿ ಆಡಳಿತ ನಡೆಸಲು ಬಿಡುತ್ತಿಲ್ಲ ಎಂದು ಆರೋಪಿಸಿದ ಯತ್ನಾಳ್, ಕಾಂಗ್ರೆಸ್ ಶಾಸಕರೇ ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಯತ್ನಿಸುತ್ತಿದ್ದಾರೆ ಎಂದರು. ತಮ್ಮದೇ ಹಾದಿಯಲ್ಲಿ ಹೋಗುತ್ತಿರುವ ಸಿದ್ದರಾಮಯ್ಯ ವಿರುದ್ದ ಡಿ.ಕೆ.ಶಿವಕುಮಾರ್ ಷಡ್ಯಂತ್ರ ನಡೆಸುತ್ತಿದ್ದಾರೆ. ಜನರು ಪ್ರೀತಿಯಿಂದ 135 ಸ್ಥಾನ ಕೊಟ್ಟು ಗೆಲ್ಲಿಸಿರುವ ಸಿದ್ದರಾಮಯ್ಯನವರು ಧೈರ್ಯವಾಗಿ ಒಳ್ಳೆಯ ನಿರ್ಣಯ ತೆಗೆದುಕೊಂಡು ಆಡಳಿತ ನಡೆಸಬೇಕು ಎಂದು ಯತ್ನಾಳ್ ನುಡಿದರು. ಜಾತಿ ಜನಾಂಗದ ಮೇಲೆ ಯಾರೂ ಸಹ ಸಿಎಂ ಆಗಲು ಸಾಧ್ಯವಿಲ್ಲ. ಸಮರ್ಥ ಆಢಳಿತ ನೀಡುವವರೇ ಸಿಎಂ ಆಗಬೇಕು ಎಂದು ಯತ್ನಾಳ್ ಸಿಎಂ ಬರ ಬ್ಯಾಟಿಂಗ್ ನಡೆಸಿದ್ದಾರೆ.