ಮೀಸಲಾತಿ ಅನುಷ್ಠಾನಗೊಳಿಸುವಂತೆ ಶಾಸಕ C.S ನಾಡಗೌಡರ ಮನೆಗೆ ಮುತ್ತಿಗೆ
ದಲಿತ ಸಂಘಟನೆಗಳ ನೂರಾರು ಸದಸ್ಯರು ಶಾಸಕ C .S ನಾಡಗೌಡರ ಇಲ್ಲಿನ ಹುಡೋ ನಿವಾಸಕ್ಕೆ ಮುತ್ತಿಗೆ ಹಾಕುವುದನ್ನು ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ನಿನ್ನೆ ರಾತ್ರಿ ಪೊಲೀಸರು ದಲಿತ ಮುಖಂಡರನ್ನು ವಶಪಡಿಸಿಕೊಂಡು ಠಾಣೆಯಲ್ಲಿ ಇರಿಸಿದ್ದಾರೆ. ಸದಾಶಿವ ಆಯೋಗದ ವರದಿ ಅನುಸಾರ, ಸುಪ್ರಿಂ ಕೋರ್ಟ್ ತೀರ್ಮಾನದಂತೆ ರಾಜ್ಯ ಸರ್ಕಾರ ಒಳ ಮೀಸಲಾತಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಸಂಘಟನೆಗಳು ಬಾಗಲಕೋಟ ಜಿಲ್ಲೆಯ ಕೂಡಲಸಂಗಮ ಕ್ರಾಸನ ರಾಷ್ಟ್ರೀಯ ಹೆದ್ದಾರಿಯಿಂದ ಮುದ್ದೇಬಿಹಾಳದವರೆಗೆ ಪಾದಯಾತ್ರೆ ನಡೆಸಿದ್ದರು.