ಬೀದರ್: ರಾಜಕೀಯದಿಂದ ದೂರ ಉಳಿಯುತ್ತೇನೆ ಅಂಥ ಜೆಡಿಎಸ್ ಪಕ್ಷದ ಯುವ ಮುಖಂಡ, ನಟ ನಿಖಿಲ್ ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಅವರು ಬೀದರ್ನಲ್ಲಿ ಮಾತನಾಡುತ್ತ ಈ ಬಗ್ಗೆ ತಿಳಿಸಿದ್ದಾರೆ. ಇದೇ ವೇಳೆ ಅವರು ಮಾತನಾಡಿ ‘ರಾಜಕೀಯದಿಂದದೂರವಿರುತ್ತೇನೆ. ಆದರೆ, ಸಾಮಾನ್ಯ ಕಾರ್ಯಕರ್ತನಾಗಿ ಲೋಕಸಭೆ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸುವೆ, ಆದರೆ ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡಲಾರೆ ಅಂತ ಅವರು ತಿಳಿಸಿದರು.
ಸದ್ಯ ನಿಖಿಲ್ ಅವರ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಈ ಹಿಂದೆ ಕೂಡ ಕುಮಾರಸ್ವಾಮಿಯವರು ಅವರು ತಮ್ಮಸಿನಿಮಾದ ಬಗ್ಗೆ ಮಾತನಾಡಿದ್ದು, ಇದಾದ ಕೆಲವೇ ದಿನದಲ್ಲಿ ನಿಖಿಲ್ ಅವರು ಹೇಳಿರುವ ಹೇಳಿಕೆ ಈಗ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.