ಗದಗ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ CDPO 1.5 ಲಕ್ಷ ರೂಪಾಯಿ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದಾರೆ.
ರೋಣದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ CDPO ಬಸಮ್ಮ ಹೂಲಿ, FDC ಜಗದೇಶ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳಾಗಿದ್ದಾರೆ.
ಗಜೇಂದ್ರಗಡ ಪಟ್ಟಣದ ಢಾಬಾ ಒಂದರಲ್ಲಿ ಹಣ ಪಡೆಯುತ್ತಿರುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಆರೋಪಿಗಳನ್ನು ಹಣದ ಸಮೇತ ವಶಕ್ಕೆ ಪಡೆದುಕೊಂಡಿದ್ದಾರೆ. ಇದರೊಂದಿಗೆ ಲೋಕಾಯುಕ್ತ ಅಧಿಕಾರಿಗಳ ತಂಡ ಭರ್ಜರಿ ದಾಳಿ ನಡೆಸಿದೆ.
ಅಂಗನವಾಡಿಗಳಿಗೆ ಆಹಾರ ಧಾನ್ಯ ಸಪ್ಲಾಯ್ ಮಾಡುತ್ತಿದ್ದ ಗುತ್ತಿಗೆದಾರ ಅನಿಲ ಎಂಬುವರಿಗೆ 42 ಲಕ್ಷ ರೂಪಾಯಿ ಆಹಾರ ಸಾಮಗ್ರಿ ಬಿಲ್ ಪಾಸ್ ಮಾಡಲು 4% ಕಮಿಷನ್ ನಂತೆ CDPO ಬಸಮ್ಮ ಹೂಲಿ ಬರೋಬ್ಬರಿ 1 ಲಕ್ಷ 50 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರಂತೆ.
ಈ ಕುರಿತು ಗುತ್ತಿಗೆದಾರ ಲೋಕಾಯುಕ್ತಕ್ಕೆ ದೂರು ನೀಡಿದ್ದು, ಈ ದೂರಿನ ಅನ್ವಯ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು 1 ಲಕ್ಷ 50 ಸಾವಿರ ಹಣ ಪಡೆಯುವಾಗ ರೆಡ್ ಹ್ಯಾಂಡ್ ವಶಕ್ಕೆ ಪಡೆದುಕೊಂಡಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ಶಂಕರ್ ರಾಗಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಘಟನೆ ಸಂಬಂಧ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.