ಧಾರವಾಡ: ತೇಜಸ್ವಿನಗರದ ಸೇತುವೆ ಮೇಲೆ ಎರಡು ಬೈಕ್ಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಪರಿಣಾಮ ಇಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ನಡೆದಿದೆ.
ಅತಿ ಜೋರಾಗಿ ಬೈಕ್ಗಳು ಸೇತುವೆ ಮೇಲೆಯೇ ಡಿಕ್ಕಿ ಹೊಡೆದಿವೆ. ಪರಿಣಾಮ ಬೈಕ್ಗಳು ಕೂಡಾ ಸಂಪೂರ್ಣವಾಗಿ ತುಂಡು ತುಂಡಾಗಿ ಬೈಕ್ ಚಾಲನೆ ಮಾಡುತ್ತಿದ್ದ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡಿದ್ದು ಅವರ ಸ್ಥಿತಿ ಚಿಂತಾಜನಕವಾಗಿದೆ.
ಇನ್ನುಳಿದ ಬೈಕ್ ಸವಾರರಿಗೆ ಅಲ್ಪಸ್ವಲ್ಪ ಪ್ರಮಾಣದ ಗಾಯವಾಗಿದ್ದು ಸದ್ಯ ಅಪಘಾತದಲ್ಲಿ ಗಾಯಗೊಂಡ ನಾಲ್ವರನ್ನು ಕೂಡಾ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಧಾರವಾಡ ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ.