ಚಿತ್ರದುರ್ಗ : ಹೊಳಲ್ಕೆರೆ ಬಳಿ ಇನೋವಾ ಕಾರ್ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 8 ಕೋಟಿ ರೂಪಾಯಿ ಹಣ ಪತ್ತೆಯಾಗಿದ್ದು, ಇದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಮಲ್ಲಾಡಿಹಳ್ಳಿ ಬಳಿ ಹೊಳಲ್ಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣವನ್ನು ವಾಹನ ಸಮೇತ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಚಿತ್ರದುರ್ಗದ ಉದ್ಯಮಿಯೊಬ್ಬರಿಗೆ ಸೇರಿದ ಹಣ ಇದಾಗಿದ್ದು, ಶಿವಮೊಗ್ಗಕ್ಕೆ ಹಣ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.
ಈ ಕುರಿತಾಗಿ ಯಾವುದೇ ದೂರು ದಾಖಲಾಗಿಲ್ಲ. ವಿಚಾರಣೆ ಬಳಿಕ ಕೇಸ್ ದಾಖಲಿಸುವ ಸಾಧ್ಯತೆ ಇದೆ ಎನ್ನಲಾಗಿದ್ದು, ಇನ್ನು ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.