ಕರ್ಣಾಟಕ : ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಅಕ್ರಮ ಎಸಗಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಮೊಮ್ಮಗ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ಸದಸ್ಯತ್ವವನ್ನು ರದ್ದುಗೊಳಿಸಿ ಶುಕ್ರವಾರ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ.
ಅಲ್ಲದೆ ಪ್ರಜ್ವಲ್ ರೇವಣ್ಣ ಅವರು ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ ಅಂಯಾ ಅರ್ಜಿದಾರರ ಪರ ವಾದ ಮಂಡಿಸಿದ್ದ ಖ್ಯಾತ ವಕಿಲೆ ಪ್ರಮೀಳ ನೇಸರ್ಗಿ ಹೇಳಿದ್ದಾರೆ.
ಪ್ರಜ್ವಲ್ ರೇವಣ್ಣ ಕೂಡ ಎ.ಮಂಜು ವಿರುದ್ದ ದೂರು ಸಲ್ಲಿಸಿದ್ದರು. ಇದೀಗ ಕೋರ್ಟ್ ಪ್ರಜ್ವಲ್ ರೇವಣ್ಣ ಮತ್ತು ಮಂಜುಗೆ ನೋಟಿಟ್ ನೀಡಿದ್ದು, ಇವರಿಬ್ಬರು 6 ವರ್ಷಗಳ ಕಾಲ ಯಾವುದೇ ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದು ಆದೇಶ ನೀಡಿದೆ ಅಂತಾ ಖ್ಯಾತ ವಕಿಲೆ ಪ್ರಮೀಳ ನೇಸರ್ಗಿ ಹೇಳಿದ್ದಾರೆ.