ಪ್ರಧಾನಿ ನರೇಂದ್ರ ಮೋದಿ ನೇತ್ರತ್ವದ ಸರ್ಕಾರ ಹಿಂದುಳಿದ ಸಮುದಾಯದ ಜೊತೆಗೆ ದೇಶದ ಸರ್ವಜನಾಂಗದ ಅಭಿವೃದ್ಧಿಗೆ ಶ್ರಮಿಸುತ್ತಿದೆ ಎಂದು ಒಬಿಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ವಿವೇಕಾನಂದ ಡಬ್ಬಿ ಹೇಳಿದರು. ವಿಜಯಪುರ ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು,
ಭಾರತ ಮುಂದಿನ ಐವತ್ತು ವರ್ಷಗಳಲ್ಲಿ ಹೇಗಿರಬೇಕೆಂದು ಯೋಚನೆ, ಯೋಜನೆ ಹಾಕಿಕೊಂಡು ಕಾರ್ಯ ನಿರ್ವಹಿಸುತ್ತಿದೆ. ಹಿಂದುಳಿದ ಸಮುದಾಯಗಳ ಅಭಿವೃದ್ಧಿ ಆಗಬೇಕಾದರೆ ಬಿಜೆಪಿ ಸರ್ಕಾರ ಬೇಕು. ಹೀಗಾಗಿ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಿಯಾಗಿಸಲು ಕೇಂದ್ರದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕು ಎಂದರು.