ಮಂಗಳೂರು: ರಸ್ತೆ ಕಾಮಗಾರಿ ಬಿಲ್ ಪಾಸ್ ಮಾಡಲು 20 ಸಾವಿರ ರೂ. ಲಂಚ ಪಡೆಯುತ್ತಿದ್ದ ಮಂಗಳೂರಿನ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಗುಣಮಟ್ಟ ಭರವಸೆ ವಿಭಾಗದ ಸಹಾಯಕ ಇಂಜಿನಿಯರ್ ರೊನಾಲ್ಡ್ ಲೋಬೋ ಲೋಕಾಯುಕ್ತ ಬಲೆಗೆ ಬಿದ್ದವರು.
ಲೋಕಾಯುಕ್ತ ಎಸ್ ಪಿ ಸೈಮನ್ ಹಾಗು ಡಿ ವೈ ಎಸ್ ಪಿ ಚಲುವರಾಜ್ ನೇತೃತ್ವದಲ್ಲಿ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.