ವಿಜಯಪುರ ನಗರದ ಜಿಲ್ಲಾ ಪೊಲೀಸ್ ಮೈದಾನದಲ್ಲಿ ನಡೆದ ಪೊಲೀಸ್ ಕಲ್ಯಾಣ ಹಾಗೂ ಧ್ವಜ ದಿನಾಚರಣೆಯಲ್ಲಿ ನಿವೃತ್ತ ಪೊಲೀಸ್ ನಿರೀಕ್ಷಕ ಎನ್.ಎಸ್. ಜನಗೌಡ ಅವರು ಧ್ವಜವಂದನೆ ಸ್ವೀಕರಿಸಿದರು. ಎಸ್ಪಿ ಲಕ್ಷ್ಮಣ ನಿಂಬರಗಿ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಟಿ.ಮಲ್ಲೇಶ ಮತ್ತಿತರರಿದ್ದಾರೆ. ‘ಸಿಬ್ಬಂದಿ ವಿವಿಧ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ನಮ್ಮ ಸಂಕಲ್ಪವನ್ನು ಮತ್ತಷ್ಟು ದೃಢಪಡಿಸಿಕೊಳ್ಳುವುದಾಗಿದೆ. ಇಲಾಖೆಯಲ್ಲಿ ಅನೇಕ ವರ್ಷಗಳ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಪೊಲೀಸರ ಸೇವೆ, ತ್ಯಾಗ ಮನೋಭಾವ ಗೌರವಿಸುವುದೇ ಈ ಕಾರ್ಯಕ್ರಮದ ಉದ್ದೇಶ ಎಂದರು.
ಧ್ವಜ ದಿನಾಚರಣೆ ಸಂದರ್ಭದಲ್ಲಿ ಪೊಲೀಸ್ ಧ್ವಜಗಳನ್ನು ಮಾರಾಟ ಮಾಡಿ, ಧ್ವಜಗಳ ಮಾರಾಟದಿಂದ ಸಂಗ್ರಹವಾದ ವಂತಿಗೆಯನ್ನು ನಿವೃತ್ತ ಮತ್ತು ಸೇವಾ ನಿರತ ಪೊಲೀಸ್ ರ ಕ್ಷೇಮಾಭಿವೃದ್ಧಿಗೆ ಬಳಸಿಕೊಳ್ಳಲಾಗುತ್ತದೆ. ಜಿಲ್ಲೆಯಲ್ಲಿ ಈಗಾಗಲೇ ಪೊಲೀಸರ ಸಲುವಾಗಿ ಹಲವಾರು ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಸುವಿಧಾ ಗ್ಯಾಸ್ ಏಜೆನ್ಸಿ, ಪೊಲೀಸ್ ಬ್ಯಾಡ್ಮಿಂಟನ್, ಶೆಟಲ್ ಕೋಟ್, ವ್ಯಾಯಾಮ ಶಾಲೆ, ಗ್ರಂಥಾಲಯ, ಪೊಲೀಸ್ ಕ್ಯಾಂಟೀನ್, ಪೊಲೀಸ್ ಸಿಬ್ಬಂದಿ ತಂಗುದಾಣ, ಶುದ್ಧ ಕುಡಿಯುವ ನೀರಿನ ಘಟಕ, ಪೊಲೀಸ್ ಸಮುದಾಯ ಭವನ, ಆರೋಗ್ಯ ಶಿಬಿರ ಸೇರಿ ಹಲವಾರು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಪೊಲೀಸ್ ಕಲ್ಯಾಣ ನಿಧಿಯಿಂದ ಪೊಲೀಸ್ ಸಿಬ್ಬಂದಿ ಮಕ್ಕಳಿಗೆ ಶೈಕ್ಷಣಿಕ ಧನ ಸಹಾಯ, ವೈದ್ಯಕೀಯ ಸಹಾಯ ವಿವಿಧ ಸೌಲಭ್ಯಗಳನ್ನು ಒದಗಿಸಲಾಗಿದೆ. ಶೇ.50ರಷ್ಟು ಅನುದಾನವನ್ನು ನಿವೃತ್ತ ಅಧಿಕಾರಿಗಳ ಪೊಲೀಸ್ ಕಲ್ಯಾಣ ಐಧಿಗೆ ಶೇ.50 ರಷ್ಟನ್ನು ಕೇಂದ್ರ ಪೊಲೀಸ್ ನಿಧಿಗೆ ಜಮೆ ಮಾಡಲಾಗುತ್ತದೆ ಎಂದರು.
ನಿವೃತ್ತ ಪೊಲೀಸ್ ನಿರೀಕ್ಷಕ ಎನ್.ಎಸ್.ಜನಗೌಡ ಅವರು ಧ್ವಜವಂದನೆ ಸ್ವೀಕರಿಸಿ ಮಾತನಾಡಿದರು.
ಆಕರ್ಷಕ ಪಥಸಂಚಲನ: ಪರೇಡ್ ಕಮಾಂಡರ್ ವಿದ್ಧಲ ಕೊಕಟನೂರ ನೇತೃತ್ವದಲ್ಲಿ ಆರ್ಎಸ್ಐ ಮಲ್ಲನಗೌಡ ಗುತ್ತರಗಿ, ದಾನೇಶ ಕಲ್ಯಾಣಿ. ಚಿದಾನಂದ ತಳವಾರ, ಕೂಡಗಿ ಪೊಲೀಸ್ ಠಾಣೆಯ ಪಿಎಸ್ಐ ಯತೀಶ ಕೆ.ಎನ್. ಕಲಕೇರಿ ಪಿಎಸ್ಐ ಸುರೇಶ ಮಂಟೂರ, ಬಬಲೇಶ್ವರ ಠಾಣೆ ಪಿಎಸ್ಐ ಅಶೋಕ ನಾಯಕ, ಝಳಕಿ ಪಿಎಸ್ಐ ಮಂಜುನಾಥ ಪಾಟೀಲ, ದೇವರಹಿಪ್ಪರಗಿ ಪಿಎಸ್ಐ ಬಸವರಾಜ ತಿಪ್ಪಾರೆಡ್ಡಿ, ಗಾಂಧಿಚೌಕ್ ಠಾಣಿ ಪಿಎಸ್ಐ ಸುಷ್ಮಾ ನಂದಗೋಳ, ಗೋಳಗುಮ್ಮಟ ಪಿಎಸ್ಐ ಎಂ.ಡಿ.ಗೋರಿ ಇವರನ್ನೊಳಗೊಂಡ 10 ತಂಡಗಳು ಆಕರ್ಷಕ ಪಥ ಸಂಚಲನ ನಡೆಸಿಕೊಟ್ಟವು. ಅರ್ಜುನ ಭಜಂತ್ರಿ ಹಾಗೂ ಮಾನೆ ನೇತೃತ್ವದ ತಂಡ ಸುಶ್ರಾವ್ಯವಾಗಿ ಬ್ಯಾಂಡ್ ನುಡಿಸಿದರು.
ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಟಿ.ಮಲ್ಲೇಶ, ಐಆರ್ಬಿ ಕಮಾಂಡೆಂಟ್ ಪ್ರಸನ್ನಕುಮಾರ, ಎಎಸ್ಪಿ ಶಂಕರ ಮಾರಿಹಾಳ, ಡಿವೈಎಸ್ಪಿ ಬಸವರಾಜ ಯಲಿಗಾರ ಮತ್ತಿತರರಿದ್ದರು.

