ವಿಜಯಪುರ: ಅಪರಿಚಿತ ವ್ಯಕ್ತಿಯ ಶವವೊಂದು ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದೆ. ಸುಮಾರು 35-40 ವಯಸ್ಸಿನ ಅಪರಿಚಿತ ವ್ಯಕ್ತಿಯ ಶವ ಸಿಕ್ಕಿದೆ. ಬದಾಮಿ ಬಣ್ಣದ ಶರ್ಟ್ ಹಾಗೂ ಬೂದಿ ಬಣ್ಣದ ಪ್ಯಾಂಟ್ ಧರಿಸಿದ್ದಾನೆ. ಗುರುತು ಪತ್ತೆ ಆದ್ರೇ ಗಾಂಧಿಚೌಕ್ ಪೊಲೀಸ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಗಾಂಧಿಚೌಕ್ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.