ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಹಡಲಗೇರಿ ರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿರುವ ಕೊಳಚೆ ಅಭಿವೃದ್ದಿ ಮಂಡಳಿಯ ಮನೆಯೊಂದರಲ್ಲಿ ಕಾರ್ಮಿಕನೊಬ್ಬ ಅನುಮಾನಾಸ್ಪ ರೀತಿಯಲ್ಲಿ ಶವವಾಗಿ ಪತ್ತೆಯಾಗಿದೆ. ಮೃತನನ್ನು ಮನೆಗಳ ನಿರ್ಮಾಣ ಕಾಮಗಾರಿಯ ಸೆಂಟ್ರಿಂಗ್ ಮೇಸ್ತ್ರೀ ವಿಜಯಪುರದ ಅಮ್ಜದ್ ಹಾಜಿಸಾಬ ವಾಲಿಕಾರ (52) ಎಂದು ಗುರ್ತಿಸಲಾಗಿದೆ. ಮೃತನ ಬೆನ್ನು ಸೇರಿ ದೇಹದ ಹಿಂಭಾಗ ರಕ್ತದ ಮಡುಗಟ್ಟಿರುವುದು ಅನುಮಾನಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ ಆತನ ಜೊತೆಗೆ ಅದೇ ಕೋಣೆಯಲ್ಲಿ ಮಲಗಿದ್ದ ಮೂವರು ಕಾರ್ಮಿಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಮುದ್ದೇಬಿಹಾಳ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.