ಬೆಂಗಳೂರು : ಕರ್ನಾಟಕ ರಾಜ್ಯದ ವಿವಿಧ ಸಾರಿಗೆ ನಿಗಮಗಳಿಗೆ 1,020 ಹೊಸ ಬಸ್ ಗಳನ್ನು ಖರೀದಿಸಲು ರಾಜ್ಯ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿದೆ.
ಇದರಲ್ಲಿ 320 ಎಲೆಕ್ಟ್ರಿಕ್ ಬಸಗಳನ್ನು ಬೆಂಗಳೂರಿಗೆ ಖರೀದಿಸಲು ಅನುಮೋದನೆ ದೊರಕಿದೆ.
ಮುಂದಿನ ದಿನಗಳಲ್ಲಿ ಬಿಎಂಟಿಸಿಗೆ 320 ಬಸ್ಗಳನ್ನು ಒಟ್ಟು ವೆಚ್ಚ ಗುತ್ತಿಗೆ (ಜಿಸಿಸಿ) ಹಣಕಾಸು ಮಾದರಿಯಲ್ಲಿ ಖರೀದಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಹೇಳಿದರು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 100 ಕೋಟಿ ರೂ.ಗಳ ವೆಚ್ಚದಲ್ಲಿ 250 ಬಸ್ಸುಗಳು, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ 150 ಕೋಟಿ ರೂ.ಗಳ ವೆಚ್ಚದಲ್ಲಿ 350 ಬಸ್ಸುಗಳು ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ 100 ಕೋಟಿ ರೂ.ಗಳ ವೆಚ್ಚದಲ್ಲಿ 250 ಬಸ್ಸುಗಳನ್ನು ಖರೀದಿಸಲಾಗುವುದು ಎಂದರು.