Cricket worldcup India vs South Africa : 37ನೇ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ.
ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ (101) ಅಜೇಯ ಶತಕ ಸಿಡಿಸಿ ಮಿಂಚಿದರು. ಈ ಮೂಲಕ ಟೀಮ್ ಇಂಡಿಯಾ 50 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 326 ರನ್ ಕಲೆಹಾಕಿತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು ಭಾರತೀಯ ಬೌಲರ್ಗಳ ಕರಾರುವಾಕ್ ದಾಳಿಗೆ ತತ್ತರಿಸಿದರು. ಪರಿಣಾಮ ಕೇವಲ 27.1 ಓವರ್ಗಳಲ್ಲಿ 83 ರನ್ಗಳಿಸಿ ಸೌತ್ ಆಫ್ರಿಕಾ ತಂಡ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ ಈ ಪಂದ್ಯದಲ್ಲಿ 243 ರನ್ಗಳ ಭರ್ಜರಿ ಜಯ ಸಾಧಿಸಿದೆ.
ಏಕದಿನ ಕ್ರಿಕೆಟ್ನಲ್ಲಿ ಸೌತ್ ಆಫ್ರಿಕಾ ಹಾಗೂ ಭಾರತ ತಂಡಗಳು ಇದುವರೆಗೆ 91 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಸೌತ್ ಆಫ್ರಿಕಾ 50 ಮ್ಯಾಚ್ಗಳಲ್ಲಿ ಜಯ ಸಾಧಿಸಿದರೆ, ಟೀಮ್ ಇಂಡಿಯಾ ಗೆದ್ದಿರುವುದು 37 ಪಂದ್ಯಗಳಲ್ಲಿ ಮಾತ್ರ. ಇನ್ನು 3 ಪಂದ್ಯಗಳು ಕಾರಣಾಂತರಗಳಿಂದ ರದ್ದಾಗಿತ್ತು.
ಸೌತ್ ಆಫ್ರಿಕಾ (ಪ್ಲೇಯಿಂಗ್ XI):ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬವುಮಾ (ನಾಯಕ), ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಯಾನ್ಸೆನ್, ಕೇಶವ್ ಮಹಾರಾಜ್, ತಬ್ರೇಝ್ ಶಮ್ಸಿ, ಕಗಿಸೊ ರಬಾಡ, ಲುಂಗಿ ಎನ್ಗಿಡಿ.
ಭಾರತ (ಪ್ಲೇಯಿಂಗ್ XI):ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್.
ಸೌತ್ ಆಫ್ರಿಕಾ ತಂಡ: ಟೆಂಬಾ ಬವುಮಾ (ನಾಯಕ), ಜೆರಾಲ್ಡ್ ಕೊಯೆಟ್ಝಿ, ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಯಾನ್ಸೆನ್, ಹೆನ್ರಿಕ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್ಗಿಡಿ, ರಾಸ್ಸೀ ವ್ಯಾನ್ ಡೆರ್ ಡಸ್ಸೆನ್, ತಬ್ರೇಝ್ ಶಂಸಿ, ಕಗಿಸೊ ರಬಾಡ, ಆಂಡಿಲೆ ಫೆಹ್ಲುಕ್ವಾಯೊ ಮತ್ತು ಲಿಝಾಡ್ ವಿಲಿಯಮ್ಸ್.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.