ರಾಜಸ್ಥಾನದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ, ಕೊಲೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಆರೋಪಿಗಳನ್ನು ಸಮೀರ್ ಮತ್ತು ಗುಲಾಂ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ಓರ್ವ ಅಪ್ರಾಪ್ತನನ್ನು ಕೂಡ ಬಂಧಿಸಲಾಗಿದ್ದು, ಮೂವರನ್ನೂ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಜಸ್ಥಾನದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ, ಕೊಲೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಸಮೀರ್ ಮತ್ತು ಗುಲಾಂ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ಓರ್ವ ಅಪ್ರಾಪ್ತನನ್ನು ಕೂಡ ಬಂಧಿಸಲಾಗಿದ್ದು, ಮೂವರನ್ನೂ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಚುರುವಿನ 10ನೇ ತರಗತಿ ವಿದ್ಯಾರ್ಥಿ ಭಾನುವಾರ ನಾಪತ್ತೆಯಾಗಿದ್ದಳು, . ಆಕೆಯ ಕುಟುಂಬದವರು ನಾಪತ್ತೆಯಾಗಿರುವ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದು, ಸೋಮವಾರ ಮಧ್ಯಾಹ್ನ ಆಕೆಯ ಶವ ಬಾವಿಯಲ್ಲಿ ಪತ್ತೆಯಾಗಿತ್ತು.
ಫತೇಪುರ್ ಮಾಜಿ ಶಾಸಕ ನಂದ್ ಕಿಶೋರ್ ಮಹಾರಿಯಾ ಮತ್ತು ಇತರ ಬಿಜೆಪಿ ನಾಯಕರು ಕುಟುಂಬಕ್ಕೆ ನ್ಯಾಯಕ್ಕಾಗಿ ಒತ್ತಾಯಿಸಿ ಧರಣಿ ಪ್ರತಿಭಟನೆ ನಡೆಸಿದರು.
ಬಾಲಕಿಯ ಕುಟುಂಬವು ಮೂವರ ವಿರುದ್ಧ ಅಪಹರಣ, ಸಾಮೂಹಿಕ ಅತ್ಯಾಚಾರ, ಬ್ಲ್ಯಾಕ್ಮೇಲಿಂಗ್ ಮತ್ತು ಕೊಲೆಯ ಆರೋಪ ಹೊರಿಸಿದ್ದರು.
ನ್ಯಾಯಯುತ ತನಿಖೆ ನಡೆಸುವುದಾಗಿ ಮತ್ತು ಆರೋಪಿಗಳನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ಭರವಸೆ ನೀಡಿದರು. ನಂತರ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲಿಸಿ ಮೂವರನ್ನು ಬಂಧಿಸಲಾಯಿತು.
ಕುಟುಂಬಕ್ಕೆ ಆರ್ಥಿಕ ನೆರವು ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಅಶೋಕ್ ಗೆಹ್ಲೋಟ್ ಸರ್ಕಾರವನ್ನು ಗುರಿಯಾಗಿಸಿದೆ.