ಅನುಮಾನಕ್ಕೆ ಔಷದಿ ಯೇ ಇಲ್ಲ ಇದಕ್ಕೆ ಪೂರಕವಾಗಿ ಒಂದು ಘಟನೆ
ಮುದ್ದು ಹೆಂಡತಿ ಪರ ಪುರುಷನೊಂದಿಗೆ ಅನೈತಿಕ ಸಂಬಂಧ ಇರಬಹುದು ಎಂದು ಅವಳನ್ನು ಈ ಲೋಕದಿಂದ ಮರೆಮಾಚಿರುವ ಅನುಮಾನ ಪಿಶಾಚಿ
ಬೆಂಗಳೂರಿನ ಹೆಗ್ಗಡೆ ನಗರದಲ್ಲಿ ಪತಿಯೊಬ್ಬ ಪತ್ನಿಯ ಶೀಲ ಶಂಕಿಸಿ ಆಕೆಯ ಕತ್ತು ಹಿಸುಕಿ ಹತ್ಯೆ ಮಾಡಿದ ಘಟನೆ ಮಂಗಳವಾರ ನಡೆದಿದೆ. ಮೃತ ಮಹಿಳೆಯನ್ನು ವೇಲಾರಮಣಿ ಹಾಗೂ ಹಂತಕನನ್ನು ಚಂದ್ರಶೇಖರ್ ಎಂದು ಗುರುತಿಸಲಾಗಿದೆ. ಹತ್ಯೆ ಬಳಿಕ ಆರೋಪಿ ಪತಿ ಸಂಪಿಗೆಹಳ್ಳಿ ಠಾಣೆಗೆ ಹೋಗಿ ಪೊಲೀಸರ ಮುಂದೆ ಶರಣಾಗಿದ್ದಾನೆ. ಈ ಬಗ್ಗೆ ಸಂಪಿಗೆಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಪೊಲೀಸರು ಆರೋಪಿ ಚಂದ್ರಶೇಖರ್ ನನ್ನು ವಿಚಾರಣೆ ನಡೆಸುತ್ತಿದ್ದಾರೆ.

