ವಿಜಯಪುರ : ನಗರದ ಗೋಳಗುಮ್ಮಟ ಕಚೇರಿಗೆ ಹುಸಿ ಬಾಂಬ್ ಇ-ಮೇಲ್ನ್ನು ಕಿಡಿಗೇಡಿಗಳು ಸಂದೇಶ ರವಾನಿಸಿದ್ದಾರೆ.
ಗೋಳಗುಮ್ಮಟ ಎದುರಿನ ಮ್ಯೂಜಿಯಂನಲ್ಲಿ ಬಾಂಬ್ ಇಟ್ಟಿದ್ದೇವೆ ಎಂದು ಇ-ಮೇಲ್ ಸಂದೇಶ ಕಳುಹಿಸಿದ್ದಾರೆ. ಮ್ಯೂಜಿಯಂನ ಹಲವು ಜಾಗೆಯಲ್ಲಿ ಬಾಂಬ್ ಇಟ್ಟಿರೋದಾಗಿ ಬೆದರಿಕೆಯನ್ನು ಟೆರರೈಸರ್ಸ್ ಗ್ರುಪ್ ಹೆಸರಲ್ಲಿ ಇ-ಮೇಲ್ ಮಾಡಿದ್ದಾರೆ.
ನಿನ್ನೆ ಸಂಜೆ ಇ-ಮೇಲ್ ಸಂದೇಶ ಗೋಳಗುಮ್ಮಟ ಸಿಬ್ಬಂದಿಗಳು ವೀಕ್ಷಿಸಿ, ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ತಡರಾತ್ರಿ ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ ಮಾಡಿದ್ದಾರೆ. ಯಾವುದೇ ಬಾಂಬ್ ಪತ್ತೆ ಇಲ್ಲ, ಈ ಇ ಮೇಲ್ ಸಂದೇಶದ ಬಗ್ಗೆ ಗೋಳಗುಮ್ಮಟ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.