ವಿಜಯಪುರ: ರಸ್ತೆ ಬದಿಗೆ ನಿಂತಿದ್ದ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿಯಾಗಿ, ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹುಲಗಬಾಳ ಕ್ರಾಸ್ ಬಳಿ ಬುಧವಾರ ತಡ ರಾತ್ರಿ ನಡೆದಿದೆ.
ತುಂಬಗಿ ಗ್ರಾಮದ ಮೆಹಬೂಬ್ ನದಾಫ್ (35), ಹುಸೇನ ಜಮಾದಾರ್ (38) ಮೃತಪಟ್ಟವರು.
ಈ ಇಬ್ಬರು ಬೈಕ್ ನಲ್ಲಿ ತಾಳಿಕೋಟೆಯಿಂದ ಮುದ್ದೇಬಿಹಾಳಗೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ತಾಳಿಕೋಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.