ಕಲಬುರಗಿ: ಕರ್ತವ್ಯ ಲೋಪ ಆರೋಪದಲ್ಲಿ ಬ್ರಹ್ಮಪುರ ಪೋಲಿಸ್ ಠಾಣೆಯ ಪೇದೆ ಮಾಳಪ್ಪ ಜಿ. ಭರಗಿ ಮತ್ತು ಅಶೋಕ್ ನಗರ ಪೋಲಿಸ್ ಠಾಣೆಯ ಮುಖ್ಯ ಪೋಲಿಸ್ ಪೇದೆ ಮಲ್ಲಿಕಾರ್ಜುನ್ ಹೆಬ್ಬಾಳ್ ಅವರನ್ನು ಅಮಾನತುಗೊಳಿಸಿ ನಗರ ಪೋಲಿಸ್ ಆಯುಕ್ತ ಆರ್. ಚೇತನ್ ಅವರು ಆದೇಶ ಹೊರಡಿಸಿದ್ದಾರೆ.
ಕೆಇಎ ಪರೀಕ್ಷೆಗಳ ಅಕ್ರಮದ ಪ್ರಮುಖ ಆರೋಪಿ ಆರ್.ಡಿ. ಪಾಟೀಲ್ಗೆ ಜಿಲ್ಲಾ ಆಸ್ಪತ್ರೆ ವೈದ್ಯಕೀಯ ಪರೀಕ್ಷೆಗೆ ಕರೆತಂದಾಗ ಆಸ್ಪತ್ರೆಯ ಒಳಭಾಗಕ್ಕೆ ವೈದ್ಯಕೀಯ ಪರೀಕ್ಷೆಗೆ ಬೇಗನೇ ಕರೆದುಕೊಂಡು ಹೋಗದೇ ಆರೋಪಿಯನ್ನು ಆಸ್ಪತ್ರೆಯ ಪ್ರವೇಶ ದ್ವಾರದ ಹತ್ತಿರ ನಿಲ್ಲಿಸಿಕೊಂಡು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಲು ಅವಕಾಶ ಮಾಡಿಕೊಟ್ಟು ಕರ್ತವ್ಯಲೋಪ ಎಸಗಿದ್ದಕ್ಕಾಗಿ ಅಮಾನತು ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.