ಬಾಗಲಕೋಟೆ : ವಿಜಯಪುರದ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಅವರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಜಯಪುರದಿಂದ ಬಾಗಲಕೋಟೆ ಮಾರ್ಗವಾಗಿ ಸಂಚರಿಸುತ್ತಿದ್ದ ವೇಳೆ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಬಾಗಲಕೋಟೆ ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯದ ಮಾಹಿತಿ ಪ್ರಕಾರ ಕುಮಾರೇಶ್ವರ ಆಸ್ಪತ್ರೆಯ ತುರ್ತು ಚಿಕಿತ್ಸಾ ವಾರ್ಡ್ನಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ.
ರಮೇಶ್ ಜಿಗಜಿಣಗಿ ಸ್ಥಿರವಾಗಿದೆ, ಯಾವ ತೊಂದರೆ ಇಲ್ಲ. ವಿಜಯಪುರದಿಂದ ಬೆಳಗಾವಿಗೆ ರಮೇಶ್ ಜಿಗಜಿಣಗಿ ಹೋಗುತ್ತಿದ್ದರು. ಬಳಿಕ ಬೆಳಗಾವಿಯಿಂದ ಕೇಂದ್ರ ಬಜೆಟ್ ಅಧಿವೇಶನಕ್ಕೆ ಹೊರಟಿದ್ದರು. ಆದ್ರೆ, ಮಾರ್ಗ ಮಧ್ಯೆ ಜಿಗಜಿಣಗಿಗೆ ಉಸಿರಾಟ ಸಮಸ್ಯೆಯಾಗಿದೆ. ಆಗ ಜಿಗಜಿಣಗಿರನ್ನು ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗ ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು,